ಈ ಬಿರು ಬೇಸಿಗೆಯಲಿ ಆ ಮಲೆಮನೆಯ ಮಡಿಲಲ್ಲಿ ಕಳೆದ ಸವಿ
ನೆನಪನ್ನು ಮೆಲಕು ಹಾಕಿಕೊಳ್ಳುವುದೇ ಏನೋ ರೋಮಾಂಚನ...!!! ಮೊದಲ ಭೇಟಿಯಲ್ಲಿ ಜಲಪಾತದ
ಎರಡನೆಯ ಹಂತದಲ್ಲೇ ಮುಕ್ತಾಯ ಮಾಡಿದ ಆ ಅಪೂರ್ಣತೆಯ ಅಳಿಸಲು ಕಳೆದ ಆಗಸ್ಟ್ ನಲ್ಲಿ ನಾನು
ಮತ್ತು ನನ್ನಿಬ್ಬರು ಗೆಳೆಯರೊಂದಿಗೆ ಹೊನ್ನಾವರದತ್ತ ನಮ್ಮ ಪಯಣ. ಮುಂಜಾನೆಯಲಿ ಮೊದಲ
ಬಸ್ಸನ್ನು ಹಿಡಿದು ಗೇರುಸೊಪ್ಪ ತಲುಪಿದ ನಾವು ಅಲ್ಲಿ ಕಾರ್ಣಿಕ ವೀರಾಂಜನೇಯನ ಅನುಗ್ರಹ
ಪಡೆದು
ಮುಂದಿನ ೫ ಮೈಲನು ಖಾಸಗೀ ವಾಹನದ ಮೂಲಕ ತಲುಪಿ ಹೊಸ ಅನ್ವೇಷಣೆಯ ಚಾರಣಕ್ಕೆ ಅಣಿಯಾದೆವು.
ಜಲಪಾತದ ಎರಡನೆಯ ಹಂತವು ೫೦ ಅಡಿ ಎತ್ತರವಿದ್ದರೆ, ದೂರದ ಬೆಟ್ಟದ ಹಸಿರಿನ ಸಾಲಿನ ಮಧ್ಯ ಬಿಳಿಯ ಮಂದಾರ ಕುಸುಮದಂತೆ ಗೋಚರಿಸುವ ಮೊದಲನೇ ಹಂತವು ೩೦೦ ಅಡಿ ಎತ್ತರದಿಂತ ಮಲೆಮನೆ ಬೆಟ್ಟದ ಒಂದು ಮಗ್ಗಲಿನಿಂದ ನೇರವಾಗಿ ಕೆಳಗೆ ಧುಮುಕುತ್ತಿರುವಂತಿದೆ. ಕೆಲವು ನಿಮಿಷಗಳವರೆಗೆ ಹಾಗೆ ಮನೋಹರವಾದ ಜಲಪಾತವ ಪೂರ್ಣ ರೂಪವನ್ನು ನೋಡುತ್ತಾ ನಮ್ಮ ಮುಂದಿನ ನಡೆಯ ಬಗ್ಗೆ ಯೋಚಿಸಲಾರಂಭಿಸಿದೆವು.
ಜಲಪಾತದ ಮೊದಲ ಹಂತಕ್ಕೆ ಯಾವುದೇ ಹಾದಿ ಇಲ್ಲದಿರುವುದರಿಂದ ನಮ್ಮದೇ ಲೆಕ್ಕಾಚಾರದಲ್ಲಿ ಭಯಾನಕ ಕಾನನದ ನಡುವೆ ಏಳು-ಬೀಳುಗಳೊಂದಿಗೆ ಹುಚ್ಚು ಧೈರ್ಯ ಮತ್ತು ಹುಂಬ ಛಲದಿಂದ ರಕ್ತ ಹೀರುವ ಇಂಬುಳ
(ಜಿಗಣೆ) ಗಳನ್ನೂ ಲೆಕ್ಕಿಸದೆ ಮೊದಲನೇ ಹಂತದ ಹತ್ತಿರ ತಲುಪಲು ಸಫಲಾರಾದೆವು. ಆದರೆ ಅಲ್ಲಿ ನೋಡಿದ್ದೇ ಬೇರೆ...!
ಇಲ್ಲಿ ಜಲಪಾತವು ಮೂರು ಹಂತದಲ್ಲಿ ವಿಶಾಲ ಬಂಡೆಯ ಕೋಟೆಯ ನಡುವೆ ಧುಮುಕುತ್ತಿದ್ದು ನಮ್ಮ ಮುಂದಿನ ಹಾದಿ ಕಠಿಣವಾಗಿತ್ತು. ಕಡಿದಾದ ಜಾರುವ ಬಂಡೆಗಳನ್ನು ಯಾವುದೇ ಉಪಕರಣದ ಸಹಾಯವಿಲ್ಲದೆ ಬೀಳುವ ಜಲಪಾತಕ್ಕೆ ವಿರುದ್ಧವಾಗಿ ಪ್ರಪಾತದ ಅಂಚಿನಿಂದ ಧೋ ಎನ್ನುವ ಮಳೆಯಲ್ಲಿ ಹತ್ತುವಾಗ ಸಿಕ್ಕ ಆ ಎದೆ ಝಲ್ಲೆನಿಸು ಮೋಜು ಇನ್ನೆಲ್ಲಿಂದ ಸಿಗಬೇಕು ಹೇಳಿ?
ತುಂಬಾ ಹೊತ್ತಿನ ಪರಿಶ್ರಮದ ನಂತರ ಕ್ಷಿರಧಾರೆಯ ಮಧ್ಯಮ ಹಂತ ತಲುಪಿದಾಗ ಆ ಕ್ಷಿರಧಾರೆಯ ನಿಜ ಅಂದವ ನೋಡಿ ಮಂದಹಾಸದೊಂದಿಗೆ ಮೂಕವಿಸ್ಮಿತರಾದೆವು. ಚಾರಣ ಪ್ರಿಯರಿಗೆ ಇಂತ ಸಾಧನೆಯಲ್ಲಿ ಸಿಗುವ ಕುಶಿ ಬೇರೆಯವರಿಗೆ ಹುಚ್ಚುತನ ಎನಿಸಿದರೂ ಅದರ ಸವಿ ಅನುಭವಿಸಿ ತಿಳಿದವರಿಗೇ ಗೊತ್ತು ಅನ್ನಿ. ಮಲೆಮನೆ ಜಲಪಾತವನ್ನು ಮದುವಣಗಿತ್ತಿಯ ರೂಪದಲ್ಲಿ ನೋಡಬೇಕಾದರೆ ಮಳೆಗಾಲದಲ್ಲೊಮ್ಮೆ ಭೇಟಿಕೊಡುವುದು ಒಳಿತು.
(ರಾ.ಹೊ.)
ನಮ್ಗೆ ಕರ್ನಾಟಕದಲ್ಲಿ ಎಲ್ಲಿ ಸುತ್ತಬೇಕಂದ್ರೂ, ಹೊಳ್ಳರು ಇದಾರೆ ಅನ್ನೋ ಒಂದು ಧೈರ್ಯ... ಹೊರಡೋ ಮುನ್ನ ಒಂದು ಫೋನ್ ಹಚ್ಚಿದ್ರಾಯ್ತು.. :)
ಪ್ರತ್ಯುತ್ತರಅಳಿಸಿNice to remember the days dear... Nice trip...
ಪ್ರತ್ಯುತ್ತರಅಳಿಸಿSundaravada jalapatha.... Mechabeku nimma sahasakke....Deepak Udupi
ಪ್ರತ್ಯುತ್ತರಅಳಿಸಿ